ಮೈಸೂರು, ಅ 16 (DaijiworldNews/HR): ಮಾಜಿ ಗುತ್ತಿಗೆದಾರನ ಮನೆಯಲ್ಲಿ ಸಿಕ್ಕ ಹಣದ ಬಗ್ಗೆ ಬಿಜೆಪಿ ಮಾಡುತ್ತಿರುವ ಆರೋಪ ಸುಳ್ಳು. ನಮಗೆ ಈವರೆಗೂ ಹೈಕಮಾಂಡ್ ನಯಾ ಪೈಸೆ ಹಣವನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರನನ್ನು ಬಿಜೆಪಿ, ಕಾಂಗ್ರೆಸ್ ಗುತ್ತಿಗೆದಾರನೆಂದು ಹೇಳಲಾಗುತ್ತಾ? ಅವನು ಬಿಜೆಪಿ ಗುತ್ತಿಗೆದಾರನೆಂದು ಈಗ ನಾನು ಹೇಳುತ್ತೇನೆ. ಅದನ್ನು ಯಾರಾದರೂ ಒಪ್ಪಿಕೊಳ್ಳುತ್ತಾರಾ ಎಂದು ಪ್ರಶ್ನಿಸಿದರು.
ಇನ್ನು ಐದು ರಾಜ್ಯ ಚುನಾವಣೆಗೂ ನಮಗೂ ಏನೂ ಸಂಬಂಧ? ನಾವೇನಾದರೂ ನಮ್ಮ ಚುನಾವಣೆಗೆ ಹೋಗಿ ಯಾರಾನ್ನಾದರೂ ಕೇಳಿದ್ದೀವಾ? ಈಗ ಅವರಿಗೆ ಕೊಡಬೇಕು ಎನ್ನುವ ಪ್ರಶ್ನೆಯಲ್ಲಿ ಅರ್ಥವೇ ಇಲ್ಲ ಎಂದು ಹೇಳಿದ್ದಾರೆ.