ಹುಬ್ಬಳ್ಳಿ, ಅ 16 (DaijiworldNews/HR): ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಮಾಡಲು ಮುಂದಾಗಿರುವ ಬಿಜೆಪಿಗೆ ನೈತಿಕತೆ ಇಲ್ಲ ಎಂದು ಮಾಜಿ ಸಿಎಂ, ಜಗದೀಶ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ರಾಜ್ಯಾಧ್ಯಕ್ಷರಿಲ್ಲ, ವಿಧಾನಸಭೆ ವಿಪಕ್ಷ ನಾಯಕನಿಲ್ಲ. ಯಾರ ನೇತೃತ್ವದಲ್ಲಿ ಹೋರಾಟ ಮಾಡುತ್ತೀರಿ, ಯಾಕೆ ಹೋರಾಟ ಮಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ಇನ್ನು ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಾಗಿ ರಾಜ್ಯದ ಕಾಂಗ್ರೆಸ್ ಸರಕಾರ 1000 ಕೋಟಿ ರೂ.ಗಳನ್ನು ಸಂಗ್ರಹ ಮಾಡಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಹೇಳಿಕೆ ಸರಿಯಲ್ಲ ಎಂದು ಹೇಳಿದ್ದಾರೆ.