ಕುಷ್ಟಗಿ, ಅ 16 (DaijiworldNews/HR): ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಮುಂದುವರಿಯುವುದು ಅನುಮಾನ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುಷ್ಠಾನಗೊಂಡಿರುವ ಯೋಜನೆಗಳು ಕಾಗದದಲ್ಲಿ ಮಾತ್ರ ಜಾರಿಯಲ್ಲಿದ್ದು, ಸರಿಯಾಗಿ ಅನುಷ್ಠಾನಗೊಂಡಿಲ್ಲ. ಇಂದಿರಾ ಕ್ಯಾಂಟೀನ್ ಮುಚ್ಚಿದಂತೆ ಈ ಯೋಜನೆಗಳು ಬಂದ್ ಆಗಲಿವೆ ಎಂದರು.
ಇನ್ನು ರೈತರ ಕೃಷಿ ಪಂಪಸೆಟ್ ಗಳಿಗೆ ನಿರಂತರ 7 ತಾಸು ವಿದ್ಯುತ್ ಪೂರೈಸಲು ಅಸಮರ್ಥವಾಗಿರುವ ಕಾಂಗ್ರೆಸ್ ಸರ್ಕಾರ ಕೇವಲ 5 ತಾಸಿಗೆ ಸೀಮಿತಗೊಳಿಸಿದ್ದು, ರೈತರೊಂದಿಗೆ ಕಣ್ಣಾ ಮುಚ್ಚಾಲೆಯಾಟ ಆಡುತ್ತಿದೆ ಎಂದಿದ್ದಾರೆ.