ಬೆಂಗಳೂರು, ಅ 19 (DaijiworldNews/AK): ಡಿಸೆಂಬರ್ 4ರಿಂದ ಡಿಸೆಂಬರ್ 15 ರವರೆಗೆ ಚಳಿಗಾಲ ಅಧಿವೇಶನ ನಡೆಸುವುದಾಗಿ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.
ಇಂದು ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸುವುದಾಗಿ ನಿರ್ಧಾರ ಕೈಗೊಳ್ಳಲಾಯಿತು.
ಡಿಸೆಂಬರ್ 3 ರಂದು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬೀಳಲಿದೆ. ಈ ಬೆನ್ನಲ್ಲೇ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.
ಡಿಸೆಂಬರ್ 15 ರ ನಂತರ ಶೂನ್ಯ ಮಾಸ ಕಾರಣ ಈ ದಿನಗಳಲ್ಲಿ ಸರ್ಕಾರ ಅಧಿವೇಶನ ನಡೆಸಲ್ಲ. ಇನ್ನು ನವೆಂಬರ್ ನಲ್ಲಿ ದೀಪಾವಳಿ ರಜೆ, ಕನಕ ಜಯಂತಿ ಇರುವುದರಿಂದ ಅಧಿವೇಶನ ನಡೆಸಲು 10 ದಿನಗಳು ಸಿಗಲ್ಲ. ಈ ಎಲ್ಲಾ ಕಾರಣಗಳಿಂದ ಡಿಸೆಂಬರ್ 4 ರಿಂದ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.