ಕೋಲಾರ, ಅ 23 (DaijiworldNews/sk): ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತರಾಗಿರುವ ಮಾಜಿ ಜಿಲ್ಲಾಪಂಚಾಯ್ತಿ ಅಧ್ಯಕ್ಷ ಎಂ.ಶ್ರೀನಿವಾಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.
ಬಾರ್ ಕಟ್ಟಡ ಕಾಮಗಾರಿಗೆ ಎಂದು ಹೊಗಳಗೆರೆ ಬಳಿ ಹೋಗುತ್ತಿದ್ದ, ವೇಳೆ ಆರು ಜನ ದುಷ್ಕರ್ಮಿಗಳು ಬಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರೆ. ತಕ್ಷಣ ಹಲ್ಲೆಗೊಳಗಾದ ಶ್ರೀನಿವಾಸ್ ಅವರನ್ನು ಕೋಲಾರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚಿಗಷ್ಟೇ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಗ್ರಾಮ ಪಂಚಾಯ್ತಿ ಸದಸ್ಯರಾದ ಅನಿಲ್ ಕುಮಾರ್ ಭೀಕರ ಹಲ್ಲೆ ನಡೆದಿದ್ದು, ಈ ಘಟನೆ ಮಾಸುವ ಮೊದಲೇ ಕಾಂಗ್ರೆಸ್ ಮುಖಂಡನ ಹಲ್ಲೆ ನಡೆದಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದೆ.