ಬೆಂಗಳೂರು, ಅ 25 (DaijiworldNews/MS): ರಾಜಕೀಯದಲ್ಲಿ ವಿಲನ್ ಇದ್ದರೆ ಅದು ಮಿಸ್ಟರ್ ಕುಮಾರಸ್ವಾಮಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ - ಬಿಜೆಪಿ ಸರ್ಕಾರ ಬೀಳುವಾಗ ಅಮೆರಿಕದಲ್ಲಿ ಕೂತಿದ್ದರು. ಇದಕ್ಕೆ ಏನೂ ಕರೆಯಬೇಕು. ಇಡೀ ಒಂದು ವರ್ಷ ಎರಡು ತಿಂಗಳು ತಾಜ್ ವೆಸ್ಟ್ ಎಂಡ್ ನಲ್ಲಿ ಕಾಲ ಕಳೆದರು. ವಿಧಾನಸಭೆಯಲ್ಲಿ ಬಿಜೆಪಿಯೇ ಸರಕಾರ ಬೀಳಿಸಿದ್ದು ಎಂದು ಹೇಳಿದರು. ಇದು ರೆಕಾರ್ಡ್ ಆಗಿದೆ. ಅಸೆಂಬ್ಲಿ ರೆಕಾರ್ಡ್ ಬೇಕಾದರೆ ಬಿಡುಗಡೆ ಮಾಡುತ್ತೇನೆ. ಈಗ ಹತಾಶರಾಗಿ ಏನೋನೋ ಮಾತನಾಡುತ್ತಿದ್ದಾರೆ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯವರು ಹತಾಶರಾಗಿದ್ದಾರೆ. ಆದರೆ ಬಿಜೆಪಿಗಿಂತ ಕುಮಾರಸ್ವಾಮಿ ಜಾಸ್ತಿ ಹತಾಶರಾಗಿದ್ದಾರೆ. ಬಿಜೆಪಿ – ಜೆಡಿಎಸ್ ದ್ದು ಕುರುಡರ ಕಥೆ ಆಗಿದೆ. ಇವರು ಅವರ ಮೇಲೆ ಅವರು ಇವರ ಮೇಲೆ ಡಿಪೇಂಡ್ ಆಗಿದ್ದಾರೆ ಖಾಲಿ ಡಬ್ಬ ಮಾತ್ರ ಶಬ್ದ ಜಾಸ್ತಿ ಮಾಡುತ್ತದೆ. ತುಂಬಿದ ಕೊಡ ತುಳುಕುವುದಿಲ್ಲ ಎಂದು ಟೀಕಿಸಿದ್ದಾರೆ.