ಹೈದರಾಬಾದ್, ಅ 26 (DaijiworldNews/HR): ತೆಲುಗು ಸುದ್ದಿ ವಾಹಿನಿಯೊಂದು ಆಯೋಜಿಸಿದ್ದ ಬಹಿರಂಗ ಚರ್ಚೆಯ ಕಾರ್ಯಕ್ರಮದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಶಾಸಕ ಕೆಪಿ ವಿವೇಕಾನಂದ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಶ್ರೀಶೈಲಂ ಗೌರ್ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದು ಇದೀಗ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಲೈವ್ ಡಿಬೇಟ್ ಕಾರ್ಯಕ್ರಮದ ವೇಳೆ ಚರ್ಚೆ ನಡೆಯುತ್ತಿರುವ ವೇಳೆ ಬಿಆರ್ಎಸ್ ಶಾಸಕ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಮೇಲೆ ಏಕಾಏಕಿ ದಾಳಿಗೆ ಮುಂದಾಗಿ ಕುತ್ತಿಗೆಗೆ ಕೈ ಹಾಕಿ ಒತ್ತಿ ಹಿಡಿದ್ದಾರೆ.
ಇನ್ನು ಉದ್ವಿಗ್ನತೆ ಹೆಚ್ಚಾದಾಗ ಪೊಲೀಸರು ಮತ್ತು ಇತರರು ಮಧ್ಯಪ್ರವೇಶಿಸಿ ಇಬ್ಬರನ್ನು ಬೇರ್ಪಡಿಸಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.