ನವದೆಹಲಿ, ಅ 26 (DaijiworldNews/HR): ಎಂಟು ಮಂದಿ ಭಾರತೀಯ ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗಳಿಗೆ ಕತಾರ್ ನ ನ್ಯಾಯಾಲಯವು ಮರಣದಂಡನೆ ವಿಧಿಸಿರುವ ಬಗ್ಗೆ ವಿದೇಶಾಂಗ ಇಲಾಖೆ ತಿಳಿಸಿದೆ.
ಮರಣದಂಡನೆಗೆ ಓಲ್ಗಾಗಿರುವ ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗಳು ಕಳೆದ ವರ್ಷ ಆಗಸ್ಟ್ನಿಂದ ಜೈಲಿನಲ್ಲಿದ್ದು, ಅವರ ವಿರುದ್ಧದ ಆರೋಪಗಳನ್ನು ಕತಾರಿ ಅಧಿಕಾರಿಗಳು ಬಹಿರಂಗಗೊಳಿಸಿಲ್ಲ.
ಈ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಅಲ್ ದಹ್ರಾ ಕಂಪನಿಯ ಎಂಟು ಭಾರತೀಯ ಉದ್ಯೋಗಿಗಳನ್ನು ಒಳಗೊಂಡಿರುವ ಪ್ರಕರಣದಲ್ಲಿ ಕತಾರ್ನ ಪ್ರಥಮ ನಿದರ್ಶನದ ನ್ಯಾಯಾಲಯವು ಇಂದು ತೀರ್ಪು ನೀಡಿದೆ ಎಂದು ತಿಳಿಸಿದೆ.