ಹುಬ್ಬಳ್ಳಿ, ಅ 29 (DaijiworldNews/HR): ಕೈ ನಾಯಕರ ನಡುವೆ ಅಧಿಕಾರಕ್ಕಾಗಿ ಆಂತರಿಕ ಕಿತ್ತಾಟ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದರು.
ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ನ ಗೊಂದಲದಿಂದ ರಾಜ್ಯದ ಜನ ಅತಂತ್ರರಾಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೆರಡು ಡಿಸಿಎಂ ಹುದ್ದೆ ಸೃಷ್ಟಿಸಬೇಕು, ಇನ್ನೂ ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕು ಇಂತಹ ರಾಜಕೀಯದಲ್ಲೇ ಮುಳುಗಿದ್ದಾರೆ ಎಂದರು.
ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿಗಳನ್ನ ಹೊರಗಿಟ್ಟು ಸಭೆ ಮಾಡುವ ಪರಿಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ.