ತೀರ್ಥಹಳ್ಳಿ, ಅ 30 (DaijiworldNews/RA/AK): ರಾಜ್ಯದ ಮಾಜಿ ಸಚಿವ, ಶಾಸಕ ಕಿಮ್ಮನೆ ರತ್ನಾಕರ್ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಿರ್ಧರಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತವನ್ನು ಪಡೆದು ಅಧಿಕಾರಕ್ಕೆ ಬಂದಿದ್ದರೂ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿತ್ತು.
ಆದರೆ ಕಿಮ್ಮನೆ ರತ್ನಾಕರ್ ಅವರು ಸಿದ್ದರಾಮಯ್ಯನವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರೂ. ಚುನಾವಣೆಯಲ್ಲಿ ಗೆಲುವುವ ಪಡೆದಿದ್ದರೆ ಸಚಿವರಾಗುವಂತಹ ಎಲ್ಲ ಸಾಧ್ಯತೆಗಳು ದಟ್ಟವಾಗಿತ್ತು.
ಅಲ್ಲದೇ ರಾಜಕೀಯ ವಲಯದಲ್ಲಿ ಪ್ರಾಮಾಣಿಕ ರಾಜಕಾರಣಿ ಎಂದೇ ಗುರುತಿಸಿಕೊಂಡಿರುವ ಅವರು ತಮ್ಮದೇ ಆದ ವರ್ಚಸ್ಸನ್ನು ಹೊಂದಿದ್ದು ಇದು ಇವರ ಮುಂದಿನ ಗೆಲುವಿಗೆ ಕಾರಣವಾಗಬಹುದು ಎಂಬ ನಿಟ್ಟಿನಲ್ಲಿ ನಿಗಮ ಮಂಡಳಿಯಲ್ಲಿ ಸ್ಥಾನ ಸಿಗಲಿದೆ ಎನ್ನಲಾಗುತ್ತಿದೆ.
ಇತ್ತ ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ಸಿದ್ಧತೆ ಮಾಡಿಕೊಳ್ತಾ ಇದ್ದು ಪಕ್ಷ ಸಂಘಟನೆಯ ದೃಷ್ಟಿಯಿಂದ ರಾಜ್ಯದ ಹಲವು ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ಮುಂದಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕಾಂಗ್ರೆಸ್ 25 ಹಾಲಿ ಶಾಸಕರೊಂದಿಗೆ ಐದು ಮಂದಿ ಮಾಜಿ ಶಾಸಕರ ಹೆಸರನ್ನೂ ಈಗಾಗಲೇ ಅಂತಿಮಗೊಳಿಸಿದ್ದು ಅದರಲ್ಲಿ ಕಿಮ್ಮನೆ ರತ್ನಾಕರ್ ಅವರ ಹೆಸರೂ ಕೂಡ ಇದೆ ಎಂದು ಎನ್ನಲಾಗುತ್ತಿದೆ.