ದಾವಣಗೆರೆ, , ಅ 31 (DaijiworldNews/AK/MR): ಇನ್ನು 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ. ಹುದ್ದೆ ಖಾಲಿ ಇಲ್ಲ ಎಂದು ವಸತಿ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಸಿದ್ದರಾಮಯ್ಯ ಪರ ಮಾತನಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಯಾರೇ ಏನಂದರೂ ಸಿದ್ದರಾಮಯ್ಯ ಪರ. ಸಿಎಂ ಸ್ಥಾನದ ಅವಧಿ ಬಗ್ಗೆ ನಿರ್ಧಾರ ಮಾಡೋದು ಹೈಕಮಾಂಡ್. ಹೈಕಮಾಂಡ್ ಹೇಳಿದ್ರೆ ಸಿದ್ದು 5 ವರ್ಷ ಸಿಎಂ ಆಗಿರುತ್ತಾರೆ ಎಂದರು ಹೇಳಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿಯಿಂದ ಆಪರೇಷನ್ ಕಮಲ ಅಸಾಧ್ಯ. ಅವರು ಹಗಲು ಕನಸು ಕಾಣ್ತಿದ್ದಾರೆ ಎಂದು ತಿರುಗೇಟು ನೀಡಿದರು.
56 ಜನ ಎಂಎಲ್ಎಗಳನ್ನು ಕರೆದುಕೊಂಡು ಹೋಗಿ ಆಪರೇಷನ್ ಮಾಡೋದು ಸಾಧ್ಯನಾ? ರಮೇಶ್ ಜಾರಕಿಹೊಳಿ ಅವರನ್ನೇ ಕೇಳಿ ಆಪರೇಷನ್ ಎಷ್ಟು ಕಷ್ಟ ಅಂತ.
ಸಮ್ಮಿಶ್ರ ಸರ್ಕಾರದಲ್ಲಿ 17 ಜನರನ್ನು ಕರೆದುಕೊಂಡು ಹೋಗಲು ಎಷ್ಟು ಸರ್ಕಸ್ ಮಾಡಿದ್ದಾರೆ. ರಮೇಶ್ ಹೈಕಮಾಂಡ್ ಬಳಿ ಬೇಳೆ ಬೇಯಿಸಿಕೊಳ್ಳಲು ಹೀಗೆ ಮಾತಾಡ್ತಿದ್ದಾರೆ ಎಂದು ಟೀಕೆ ಮಾಡಿದರು.
ರಮೇಶ್ ಬಿಜೆಪಿಯಲ್ಲಿ ಇರೋ ಶಾಸಕರನ್ನು ಉಳಿಸಿಕೊಳ್ಳಲಿ. ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಬರಲು ಒಂದು ಕಾಲಿನಲ್ಲಿ ನಿಂತಿದ್ದಾರೆ ಎಂದು ಚಾಟಿ ಬೀಸಿದ್ದಾರೆ.