ನವದೆಹಲಿ, ನ 01 (DaijiworldNews/PC): ಸರ್ಕಾರ ಒಡೆತನದ ತೈಲ ಕಂಪನಿಗಳು ಇಂದಿನಿಂದ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 101.50 ರೂ.ಗಳಷ್ಟು ಹೆಚ್ಚಿಸಿವೆ.
ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ. ಹೊಸ ದರ ಎಲ್ಪಿಜಿ ಸಿಲಿಂಡರ್ಗಳ ಹೊಸ ಬೆಲೆಗಳು 19 ಕೆಜಿ ವಾಣಿಜ್ಯ ಸಿಲಿಂಡರ್ಗಳಿಗೆ ಮಾತ್ರ ಅನ್ವಯಿಸುತ್ತವೆ.
ಕಳೆದ ಅ. 1ರಂದು ತೈಲ ಕಂಪನಿಗಳು ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ದರದಲ್ಲಿ 209 ರೂ.ಗಳಷ್ಟು ಏರಿಕೆ ಮಾಡಿತ್ತು. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 100-103 ರೂ.ನಷ್ಟು ಹೆಚ್ಚಳವಾಗಿದೆ. ಇಂದಿನಿಂದ ದೆಹಲಿಯಲ್ಲಿ 1833 ರೂಪಾಯಿಗೆ 19ಕೆಜಿ ಎಲ್ಪಿಜಿ ಸಿಲಿಂಡರ್ ದೊರಕಲಿದೆ.