ಮೈಸೂರು, ಏ 15 (MSP): "ಮೈತ್ರಿ ಸರ್ಕಾರ ಐದು ವರ್ಷ ಇರಬೇಕು, ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸರಕಾರ ಉಳಿಯಬೇಕಾದರೆ ಮೈತ್ರಿಕೂಟದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಬೇಕು" -ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಿತ್ರಪಕ್ಷಗಳ ಕಾರ್ಯಕರ್ತರಿಗೆ ನೀಡಿದ ಗುರಿ.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಸಚಿವ ಜಿ.ಟಿ. ದೇವೇಗೌಡ ಜತೆಗಿನ ಮುನಿಸು ಮರೆತು ಜಂಟಿ ಪ್ರಚಾರ ನಡೆಸಿದ ಸಿದ್ದರಾಮಯ್ಯ, ನಾವು 20೦ ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು, ಇಲ್ಲದಿದ್ದರೆ ಸರ್ಕಾರ ಇದೆಲ್ಲಾ ನೀವು ತಿಳಿದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಮಾರ್ಮಿಕವಾಗಿ ನುಡಿದರು.
ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ಅವರನ್ನು ಗೆಲ್ಲಿಸಬೇಕೆಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಎಚ್ಚರಿಕೆಯ ದನಿಯಲ್ಲಿ ಹೇಳಿದ ಅವರು, ನಾನು ಈಗ ಮಂತ್ರಿಯಾಗಿಲ್ಲ, ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಜಿ.ಟಿ. ದೇವೇಗೌಡ, ಸಾ.ರಾ ಮಹೇಶ್ , ಡಿ.ಸಿ ತಮ್ಮಯ್ಯ ಸಚಿವರಾಗಿದ್ದಾರೆ. ಕಾಂಗ್ರೆಸ್ ನ 22 ಮಂದಿ ಮಂತ್ರಿಗಳಾಗಿದ್ದಾರೆ ಅದು ಬೇರೆ ವಿಚಾರ ಬಿಜೆಪಿಯವರು ಅಧಿಕಾರಕ್ಕೆ ಬಾರದ ಹಾಗೇ ನೋಡಿಕೊಳ್ಳಬೇಕು. ಅದಕ್ಕೆ ತಾನೆ ನಾವು ಒಂದಾಗಿರೋದು ಎಂದು ಮೈತ್ರಿ ಕೂಟದ ಅಭ್ಯರ್ಥಿಗಳು ಸೋತರೆ ಸರಕಾರ ಇರಲು ಹೇಗೆ ಸಾಧ್ಯ ಎಂದು ಹೇಳಿದರು. ಟಿ.ಟಿ. ದೇವೇಗೌಡ ಕೂಡ ಇದನ್ನು ಬೆಂಬಲಿಸಿದರು.