ಹಾಸನ : ನ 2 (DaijiworldNews/MR): ಪರೀಕ್ಷೆಯಲ್ಲಿ ಕಾಪಿ ಮಾಡಿದ ಆರೋಪಕ್ಕೆ ಕ್ಷಮಾಪಣೆ ಪತ್ರ ಬರೆದುಕೊಡು ಎಂದು ಹೇಳಿದ್ದಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಮನನೊಂದು ಕಾಲೇಜಿನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ರಾಜೀವ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಚನ್ನರಾಯಪಟ್ಟಣ ತಾಲೂಕಿನ ಹೊನ್ನಶೆಟ್ಟಿಹಳ್ಳಿ ಗ್ರಾಮದ ಮಾನ್ಯ(19) ಮೃತಪಟ್ಟಿರುವ ದುರ್ದೈವಿ. ಈಕೆ ಮೊದಲನೇ ವರ್ಷದ ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೆಷನ್ ಓದುತ್ತಿದ್ದಳು.
ಇಂದು ಮೊದಲ ವರ್ಷದ ಪರೀಕ್ಷೆ ಬರೆಯುತ್ತಿದ್ದ ಮಾನ್ಯ ಪರೀಕ್ಷೆ ಸಮಯದಲ್ಲಿ ಕಾಪಿ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಾಲೇಜು ಪ್ರಾಂಶುಪಾಲರಿಗೆ ಅಪಾಲಜಿ ಲೆಟರ್ ಬರೆದುಕೊಡುವಂತೆ ಉಪನ್ಯಾಸಕರು ತಿಳಿಸಿದ್ದರು.
ಇದರಿಂದ ಮನನೊಂದ ವಿದ್ಯಾರ್ಥಿನಿ ಪ್ರಾಂಶುಪಾಲರ ಕೊಠಡಿಗೆ ತೆರಳಿದ ಬಳಿಕ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಯುತ್ತಿದೆ.