ನವದೆಹಲಿ, ಎ15(SS): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಕೋಮು ಭಾವನೆ ಕೆರಳುವ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ.
ಮಾಯಾವತಿ, ಯೋಗಿ ಆದಿತ್ಯನಾಥ್ ಇಬ್ಬರಿಗೂ ಚುನಾವಣಾ ಆಯೋಗ ನೊಟೀಸ್ ಜಾರಿಗೊಳಿಸಿದ್ದು, ನಾಳೆ ಬೆಳಗ್ಗೆ 6ರಿಂದ ಸೂಚನೆ ಜಾರಿಗೆ ಬರಲಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ 72 ಗಂಟೆಗಳ ಕಾಲ ಪ್ರಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಯೋಗಿ ಆದಿತ್ಯನಾಥ್ಗೆ 72 ಗಂಟೆ ಹಾಗೂ ಮಾಯಾವತಿಗೆ 48 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಮುಸ್ಲಿಮರಿಗೆ ಮತ ಹಾಕಿ ಎಂದು ಹೇಳಿರುವ ಕಾರಣಕ್ಕೆ ಮಾಯಾವತಿಗೆ ಹಾಗೂ ಅಲಿ, ಬಜರಂಗ ಬಲಿ ಕುರಿತ ಹೇಳಿಕೆಗೆ ಯೋಗಿ ಆದಿತ್ಯನಾಥ್ಗೆ ನೋಟಿಸ್ ನೀಡಲಾಗಿದೆ.