ನವದೆಹಲಿ, ನ 07 (DaijiworldNews/AA) : ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೀಗ ಈ ತೀರ್ಪಿನ ವಿರುದ್ಧ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ.
ಸಿಬಿಐ ಪರ ವಾದ ಮಂಡಿಸಿದ ಎಎಸ್ಜಿ ಎಸ್ವಿ ರಾಜು ಅವರು ಸುಳ್ಳಿನ ಆಧಾರದಲ್ಲಿ ಸಂಪೂರ್ಣ ತನಿಖೆಗೆ ತಡೆ ನೀಡಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಈ ಹಿಂದೆ ಸಿಬಿಐ ಡಿಕೆಶಿ ಅವರ ವಿಚಾರಣೆ ಮಾಡದೆ ಹೈಕೋರ್ಟ್ ತನಿಖೆಗೆ ತಡೆಯಾಜ್ಞೆ ನೀಡಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು.
ಇನ್ನು
ಡಿಕೆಶಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಈ ಕುರಿತಾಗಿ ಉತ್ತರಿಸಲು ಕೊಂಚ ಕಾಲಾವಕಾಶ ಕೋರಿದರು.ಇನ್ನು ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಪುನರಾರಂಭಿಸಲಿದೆ. ಇನ್ನು ಈ ಪ್ರಕರಣದ ಕುರಿತು ಜೂನ್ ತಿಂಗಳಿನಲ್ಲಿ ಕರ್ನಾಟಕ ಹೈಕೋರ್ಟ್ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡಿತ್ತು. ಬಳಿಕ ಇದೀಗ ಸಿಬಿಐ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಇದೀಗ ವಿಚಾರಣೆಗೆ ಗ್ರೀನ್ ಸಿಗ್ನಲ್ ನೀಡಿದೆ.