ಬೆಂಗಳೂರು,ಏ15(AZM): ಏಪ್ರಿಲ್ 18 ರಂದು ರಾಜ್ಯದಲ್ಲಿ 14 ಲೋಕಸಭೆ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆಗೆ ಮತದಾನ ನಡೆಯುವ ಹಿನ್ನಲೆ ಏಪ್ರಿಲ್ 16, 17, 18 ರಂದು ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆ ಮಾಹಿತಿ ನೀಡಿದ್ದು, ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗೆ ಹಾಗೂ ಪೊಲೀಸ್ ಇಲಾಖೆಗೆ 3314 ಬಸ್ ಗಳನ್ನು ಕಳುಹಿಸಿಕೊಡಲಾಗುವುದು. ಈ ಹಿನ್ನೆಲೆಯಲ್ಲಿ ಬಸ್ ಸಂಚಾರದಲ್ಲಿ 3 ದಿನಗಳ ಕಾಲ ವ್ಯತ್ಯಯವಾಗಲಿದೆ ಎಂದು ಹೇಳಲಾಗಿದೆ.
ಅದೇ ರೀತಿ ಏಪ್ರಿಲ್ 23 ರಂದು ರಾಜ್ಯದ 14 ಲೋಕಸಭೆ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದ್ದು, ಆ ದಿನಗಳಲ್ಲಿ ಕೂಡ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಪ್ರಯಾಣಿಕರು ಬೇರೆ ವ್ಯವಸ್ಥೆ ಮಾಡಿಕೊಳ್ಳುವುದು ಒಳ್ಳೆಯದು ಎಂದು ಹೇಳಲಾಗಿದೆ.