ಹಾಸನ,ಏ15(AZM):ಯುವಕರು ದೇಶದ ಭವಿಷ್ಯವಾಗಿದ್ದು ದೇಶ ಕಟ್ಟಲು ಯುವಕರೇ ಸಾಕು ಮೋದಿ ಬೇಕಾಗಿಲ್ಲ ಎಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.
ಹಾಸನದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಈ ಕುರಿತು ಅವರು ಮಾತನಾಡಿದರು.ನಿರುದ್ಯೋಗ ಸಮಸ್ಯೆಯನ್ನು ಕೆಲವು ಪಕ್ಷಗಳು ಬಂಡವಾಳ ಮಾಡಿಕೊಂಡು ರಾಜಕೀಯ ಮಾಡುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು 10 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದು ಅದು ಇನ್ನೂ ಈಡೇರಿಲ್ಲ.ಯುವಕರು ಸ್ಥಳೀಯವಾಗಿ ತಮ್ಮ ಸಮಸ್ಯೆಗಳಿಗೆ ಸ್ಪಂದಿಸುವಂತಹ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಮಾತಿಗೆ ಮರುಳಾಗಬಾರದು ಎಂದು ತಿಳಿಸಿದರು. ಸ್ಥಳೀಯ ಯುವಕರಿಗೆ ಸೂಕ್ತ ಉದ್ಯೋಗ ದೊರೆಯಬೇಕು. ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಸ್ಥಳೀಯರಿಗೆ ಶೇ.70ರಷ್ಟು ಉದ್ಯೋಗ ಮೀಸಲಿಟ್ಟಾಗ ನಿರುದ್ಯೋಗ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದರು.
ಸಮಾಜದಲ್ಲಿ ಶಾಂತಿ ನೆಲೆಸಲು ಜಾತ್ಯತೀತ ನಿಲುವು ಹೊಂದಿರುವ ಜೆಡಿಎಸ್ನಿಂದ ಮಾತ್ರ ಸಾಧ್ಯ ಎಂದ ಅವರು, ಸದೃಢವಾದ ಭಾರತ ನಿರ್ಮಾಣ ಮಾಡಲು ಯುವಕರ ಅಗತ್ಯವಿದೆ. ಬಿಜೆಪಿಯನ್ನು ದೂರವಿಟ್ಟರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.