ಬೆಂಗಳೂರು, ನ 9 (DaijiworldNews/SK): ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರು ತಮ್ಮ ರಾಜಕೀಯ ಬದುಕಿಗೆ ನಿವೃತ್ತಿ ಘೋಷಿಸಿರುವ ಆದರೆ ಈ ಬಗ್ಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಘಟಕ ಸಾಮಾಜಿಕ ಜಾಲತಾಣ Xನಲ್ಲಿ ವ್ಯಂಗ್ಯವಾಡಿದೆ.
ಈ ಬಗ್ಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಘಟಕ ಸಾಮಾಜಿಕ ಜಾಲತಾಣ Xನಲ್ಲಿ ಟ್ವೀಟ್ ಮಾಡಿದ್ದು, ಬಿಜೆಪಿ ಹೈಕಮಾಂಡ್ ನಾಯಕರು ಸದಾನಂದಗೌಡರನ್ನು ಕರೆಸಿ ಅವಮಾನಿಸಿ ಕಳುಹಿಸಿದ್ದಾರೆ ಇದರಿಂದ ನೊಂದು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ವ್ಯಂಗ್ಯವಾಡಿದೆ.
ಬಿಜೆಪಿ ಹೈಕಮಾಂಡ್ ನಾಯಕರು ಕರೆಸಿ ಅವಮಾನಿಸಿ ಕಳಿಸಿದ್ದರಿಂದ ನೊಂದ ಸದಾನಂದಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. "ಸಂತೋಷ ಕೂಟ"ದ ದಾಳಕ್ಕೆ ಮುಂದಿನ ಲೋಕಸಭೆಯ ಟಿಕೆಟ್ ಸಿಗದೆ ಮತ್ತೊಮ್ಮೆ ಅವಮಾನವಾಗುವ ಸುಳಿವನ್ನು ಅರಿತು ಈಗಲೇ ಗುಡ್ ಬೈ ಹೇಳಿದ್ದಾರೆ. ಎಲ್ಲಾ ತಲೆಗಳನ್ನೂ ಉರುಳಿಸಿ "ನಾಯಕತ್ವ ಮುಕ್ತ ಬಿಜೆಪಿ" ಮಾಡುವಲ್ಲಿ ಸಂತೋಷ ಕೂಟ ಯಶಸ್ವಿಯಾಗಿದೆ ಎಂದು ಲೇವಡಿ ಮಾಡಿದೆ.