ಕಾರವಾರ, ನ 10 (DaijiworldNews/HR): ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಎಂಬ ಬಿಸ್ಕೆಟ್ ಹಾಕಿ ಅಧಿಕಾರಕ್ಕೆ ಬಂದಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ವರ್ಷಗಳ ನಂತರ ರಾಜ್ಯಕ್ಕೆ ಬಹಳ ಕೆಟ್ಟ ಪರಿಸ್ಥಿತಿ ಬಂದಿದ್ದು, ಜನರಿಗೆ ಈಗ ಅನ್ನಿಸಿದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಂದು ತಪ್ಪು ಮಾಡಿದ್ದೇವೆಂದು. ಮದ್ಯದ ಬೆಲೆ ಏರಿಸಿ ಆ ಹಣದಲ್ಲೇ ಗೃಹ ಲಕ್ಷ್ಮಿ ಮೂಲಕ ಮಹಿಳೆಯರಿಗೆ ಎರಡು ಸಾವಿರ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು ಸಮರ್ಥ ಅಧಿಕಾರ ನಡೆಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ರೈತರ-ಬಡವರ ಅಭಿವೃದ್ಧಿಗೆ ಪೂರಕ ಯೋಜನೆ ನೀಡದೆ ಸಮಯ ವ್ಯರ್ಥದ ಆಡಳಿತ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.