ಬೆಂಗಳೂರು, ನ 11 (DaijiworldNews/AA) : ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ರಾಜ್ಯ ಕಾಂಗ್ರೆಸ್ ಘಟಕ ವ್ಯಂಗ್ಯವಾಗಿ ಶುಭಾಶಯ ಕೋರಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಕಾಂಗ್ರೆಸ್, ಯಡಿಯೂರಪ್ಪನವರ ಮಗ ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ ಅವರಿಗೆ ಅಭಿನಂದನೆಗಳು.
ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂದು ವ್ಯಂಗ್ಯವಾಗಿ ಶುಭಾಶಯ ಕೋರಿದೆ.
ಕಾಂಗ್ರೆಸ್ ನ ಈ ಟ್ವೀಟ್ ಗೆ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಪರ ವಿರೋಧ ವ್ಯಕ್ತವಾಗುತ್ತಿದೆ.