ನವದೆಹಲಿ, ನ 11 (DaijiworldNews/AA): ಪ್ರಸ್ತುತ ದೇಶದೆಲ್ಲೆಡೆ ಚರ್ಚೆಗೆ ಕಾರಣವಾಗಿರುವ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಉತ್ತರಕಾಂಡ ರಾಜ್ಯವು ಒಂದು ಹೆಜ್ಜೆ ಮುಂದಿಟ್ಟಿದೆ. ಈ ಮೂಲಕ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ಮೊದಲ ರಾಜ್ಯವಾಗಿ ಹೊರಹೊಮ್ಮಲಿದೆ.
ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶ ರಂಜನಾ ದೇಸಾಯಿ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದ್ದು, ಈ ಸಮಿತಿ ಇನ್ನು ಕೆಲವೇ ಕೆಲ್ವು ದಿನಗಳಲ್ಲಿ ಉತ್ತರಕಾಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರಿಗೆ ವರದಿ ನೀಡಲಿದೆ. ದೀಪಾವಳಿ ಹಬ್ಬದ ಬಳಿಕ ಕರೆಯಲಾಗಿರುವ ಉತ್ತರಾಖಂಡ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಏಕರೂಪ ನಾಗರಿಕೆ ಸಂಹಿತೆ ಮಂಡಿಸಲಾಗುತ್ತದೆ ಹಾಗೂ ಕಾನೂನು ರೂಪ ನೀಡಲಾಗುತ್ತದೆ ಎಂದು ವರದಿ ತಿಳಿಸಿದೆ.
ಇದೇ ಜೂನ್ ನಲ್ಲಿ ಏಕರೂಪ ನಾಗರಿಕ ಸಂಹಿತೆಯ ಕರಡು ಸಮಿತಿಯ ಸದಸ್ಯರಾದ ನಿವೃತ್ತ ನ್ಯಾ. ರಂಜನಾ ಪ್ರಕಾಶ್ ದೇಸಾಯಿ ಅವರು ಉತ್ತರಾಖಂಡಕ್ಕೆ ಏಕರೂಪ ನಾಗರಿಕ ಸಂಹಿತೆಯ ಕರಡು ರಚನೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಉತ್ತರಾಖಂಡ ರಾಜ್ಯದ ನಂತರ ಗುಜರಾತ್ ಕೂಡಾ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇನ್ನು 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಗೂ ಮುನ್ನ ಇದನ್ನು ಜಾರಿಗೆ ತರಲಾಗುತ್ತದೆ ಎಂದು ತಿಳಿದುಬಂದಿದೆ.