ಬೆಂಗಳೂರು, ನ 12 (DaijiworldNews/HR): ಗ್ಯಾರಂಟಿಗಳ ಮೂಲಕ ಕಾಂಗ್ರೆಸ್ ಆಡಳಿತಕ್ಕೆ ಬಂದಿದ್ದು, ಪಂಚ ರಾಜ್ಯದ ಚುನಾವಣೆಯಲ್ಲೂ ಇದೇ ಮಾದರಿ ಜಾರಿಗೆ ತರಲು ಕಾಂಗ್ರೆಸ್ ಹೊರಟಿದೆ. ಆದರೆ ಗ್ಯಾರಂಟಿಗಳು ಜನರ ಬದುಕಿಗೆ ಆಶಾದಾಯಕವಾಗಿಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಚುನಾವಣೆಗೂ ಮೊದಲು ಮಹದೇವಪ್ಪ ನಿಂಗೂ ಫ್ರೀ, ಕಾಕಾ ಪಾಟೀಲ್ ನಿಂಗೂ ಫ್ರೀ ಎಂದು ಘೋಷಿಸಿದ್ದರು. ಆದರೆ ಈಗ ಮಹದೇವಪ್ಪ ನಿಂಗೂ ಕತ್ತಲು ಕಾಕಾ ಪಾಟೀಲ್ ನಿಂಗೂ ಕತ್ತಲು ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಇನ್ನು ಗೃಹಜ್ಯೋತಿ ಹೆಸರಿನಲ್ಲಿ ಹೊರ ರಾಜ್ಯದಿಂದ ವಿದ್ಯುತ್ ಖರೀದಿ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂಧನ ಇಲಾಖೆ ಅಧೋಗತಿಗೆ ತಲುಪಿದೆ. ಗೃಹ ಜ್ಯೋತಿ ಹೆಸರಲ್ಲಿ ಕತ್ತಲ ಭಾಗ್ಯ ನೀಡುತ್ತಿದೆ ಎಂದಿದ್ದಾರೆ.