ಬೆಂಗಳೂರು, ನ 12 (DaijiworldNews/RA):ರಾಜ್ಯದಲ್ಲಿ ಡುಪ್ಲಿಕೇಟ್ ಮುಖ್ಯಮಂತ್ರಿ ಅಂತ ಇದ್ದಾರೆ. ಅವರು ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿ ನಗೆಪಾಟಲಿಗೀಡಾಗಿದ್ದಾರೆ. ರಾಜ್ಯದ ಜನರಿಗೆ ಗ್ಯಾರಂಟಿ ಹೆಸರಿನಲ್ಲಿ ಕಿವಿಗೆ ಹೂವು ಮುಡಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಈಗ ತೆಲಂಗಾಣದಲ್ಲಿ ಹೋಗಿ ಮತದಾರರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ' ಎಂದು ಮಾಜಿ ಮುಖ್ಯಮಂತ್ರಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ತೆಲಂಗಾಣದಲ್ಲಿ ಚುನಾವಣಾ ಭಾಷಣ ಮಾಡಲು ಹೋಗಿ ಅವಮಾನಕ್ಕೀಡಾಗಿ ಬಂದಿದ್ದಾರೆ.
ಪಂಚ ರಾಜ್ಯಗಳ ಚುನಾವಣೆಯ ಅಂಶಗಳಲ್ಲಿ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಬದುಕಿನ ಭಾಗ್ಯ ತೆರೆದಿದೆ ಎಂಬ ಭಜನೆ ಕೇಳುತ್ತಿದ್ದೇವೆ. ಇದಕ್ಕೆ ಜನ ಮರುಳಾಗಬಾರದು ಎಂದು ಹೇಳಿದರು.
ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 2 ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಅವರು ತೆಲಂಗಾಣದಲ್ಲಿ ಹೇಳಿದ್ದಾರೆ. ಕರ್ನಾಟಕದಲ್ಲೇ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಮೊದಲು ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ ಎಂದು ಆಗ್ರಹಿಸಿದರು.