ಪುಣೆ, ನ 12 (DaijiworldNews/RA): ಎನ್ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹುಟ್ಟೂರಾದ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ತಮ್ಮ ಕುಟುಂಬದವರು ನಡೆಸುತ್ತಿರುವ ವಿದ್ಯಾ ಪ್ರತಿಷ್ಠಾನ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ
ದೀಪಾವಳಿ ಹಿನ್ನೆಲೆಯಲ್ಲಿ ಪವಾರ್ ಅವರು ಬಾರಾಮತಿಗೆ ತೆರಳಿದ್ದರು ಅನ್ನುವ ಮಾಹಿತಿ ಇದೆ. ಶನಿವಾರ ಈ ಘಟನೆ ನಡೆದಿದ್ದು, ಅವರನ್ನು ಪರೀಕ್ಷಿಸಿದ ವೈದ್ಯರು ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ.