ನವದೆಹಲಿ, ನ 14 (DaijiworldNews/HR): ಬಿ.ವೈ.ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯದಿಂದಾಗಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದು, ಅವರು ಪಕ್ಷದ ಆಸ್ತಿ ಎನ್ನುವುದನ್ನು ಅವರು ಸಾಬೀತುಪಡಿಸಿದ್ದಾರೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಯುವ ನಾಯಕರಾಗಿರುವ ವಿಜಯೇಂದ್ರ ಅವರ ನೇಮಕವಾಗಿದ್ದು, ಬಿಜೆಪಿಯು ಶ್ರಮಶೀಲ ಯುವಶಕ್ತಿಯನ್ನು ಗೌರವಿಸುತ್ತದೆ ಮತ್ತು ಪ್ರೋತ್ಸಾಹಿಸುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದರು.
ಇನ್ನು ನಾವು ಯಾವಾಗಲೂ ಧನಾತ್ಮಕ ಬದಲಾವಣೆ ಮತ್ತು ಸುಧಾರಣೆಯನ್ನು ಪ್ರತಿಪಾದಿಸಿದ್ದೇವೆ. ಈ ನೇಮಕಾತಿಯು ಸಕಾರಾತ್ಮಕ ಬೆಳವಣಿಗೆಗಳನ್ನು ಉತ್ತೇಜಿಸುವ ನಮ್ಮ ಬದ್ಧತೆಯನ್ನು ಸೂಚಿಸುತ್ತದೆ ಎಂದು ತಿಳಿಸಿದ್ದಾರೆ.