ನ 15 (DaijiworldNews/HR): ಸಹಾರಾ(SAHARA) ಗ್ರೂಪ್ನ ಸಂಸ್ಥಾಪಕ ಸುಬ್ರತಾ ರಾಯ್(75 ) ಅವರು ಹೃದಯಸ್ತಂಭನದಿಂದ ನಿಧನರಾಗಿದ್ದಾರೆ.
ಸುಬ್ರತಾ ರಾಯ್ ಅವರ ಆರೋಗ್ಯ ಕ್ಷೀಣಿಸಿದ ಹಿನ್ನೆಲೆಯಲ್ಲಿ ಅವರನ್ನು ಭಾನುವಾರ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ ದಾಖಲಿಸಲಾಗಿತ್ತು. ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಉಂಟಾಗುವ ಆರೋಗ್ಯ ಸಮಸ್ಯೆಯಿಂದ ಹೃದಯ ಸ್ತಂಭನದಿಂದಾಗಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಜೂನ್ 10, 1948 ರಂದು ಬಿಹಾರದ ಅರಾರಿಯಾದಲ್ಲಿ ಜನಿಸಿದ ರಾಯ್ ಭಾರತದ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು.
ಗೋರಖ್ಪುರದ ಸರ್ಕಾರಿ ತಾಂತ್ರಿಕ ಸಂಸ್ಥೆಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದ ಬಳಿಕ 1976 ರಲ್ಲಿ ಸಹಾರಾ ಫೈನಾನ್ಸ್ ಸ್ಥಾಪಿಸಿದರು. ಆ ಬಳಿಕ 1978 ರಲ್ಲಿ ಇದನ್ನು ಸಹಾರಾ ಇಂಡಿಯಾ ಪರಿವಾರ್ ಪರಿವರ್ತಿಸಿದ್ದರು.