ಬೆಂಗಳೂರು, ಎ16(Daijiworld News/SS): ಪ್ರಜಾಪ್ರಭುತ್ವದಲ್ಲಿ ಪ್ರಜೆಗಳು ಉತ್ತಮ ನಾಯಕನನ್ನು ಆರಿಸಿದರೆ ಪ್ರಜೆಗಳು ಗೆದ್ದಂತೆ. ಕೆಟ್ಟ ನಾಯಕನನ್ನು ಆಯ್ಕೆ ಮಾಡಿದರೆ ಪ್ರಜೆಗಳು ಸೋತಂತೆ ಎಂದು ನಟ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾರ ವಿರುದ್ಧವೂ ಸ್ಪರ್ಧೆ ಮಾಡುತ್ತಿಲ್ಲ. ಜನರಿಗಾಗಿ ಹೋರಾಟ ಮಾಡುತ್ತಿದ್ದೇನೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳು ಉತ್ತಮ ನಾಯಕನನ್ನು ಆರಿಸಿದರೆ ಪ್ರಜೆಗಳು ಗೆದ್ದಂತೆ. ಕೆಟ್ಟ ನಾಯಕನನ್ನು ಆಯ್ಕೆ ಮಾಡಿದರೆ ಪ್ರಜೆಗಳು ಸೋತಂತೆ ಎಂದು ಹೇಳಿದರು.
ಹಾಲಿ ಲೋಕಸಭೆ ಚುನಾವಣೆಯ ನಿಮಿತ್ತ ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಇನ್ನು ಕೇವಲ ಎರಡು ದಿನ ಮಾತ್ರ ಬಾಕಿ ಇದ್ದು, ಇಂದು ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಹಿನ್ನಲೆಯಲ್ಲಿ ಇಂದು ನಟ ಪ್ರಕಾಶ್ ರೈ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.