ಜೈಪುರ, .15 (DaijiworldNews/AK): ಭಾರತೀಯ ಜನತಾ ಪಕ್ಷದ ನಾಯಕ ಮತ್ತು ರಾಜಸ್ಥಾನ ಕ್ರಿಕೆಟ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಅಮೀನ್ ಪಠಾಣ್ ಅವರು ಬುಧವಾರ ಕೇಸಿರ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಪಕ್ಷದ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಅಮೀನ್ ಪಠಾಣ್ ಅವರು ಸೇರ್ಪಡೆಗೊಳಿಸಿದರು.
ಕಾಂಗ್ರೆಸ್ ಸೇರ್ಪಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಠಾಣ್, ದೇಶವನ್ನು ಒಗ್ಗೂಡಿಸಲು ಅಟಲ್ ಬಿಹಾರಿ ವಾಜಪೇಯಿ, ಭೈರೋನ್ ಸಿಂಗ್ ಶೇಖಾವತ್ ಮತ್ತು ಇತರ ನಾಯಕರ ನೀತಿಗಳಿಂದ ಸ್ಫೂರ್ತಿಗೊಂಡು 25 ವರ್ಷಗಳ ಕಾಲ ಬಿಜೆಪಿಯಲ್ಲಿದ್ದೆ ಎಂದರು.
ಇಂದಿನ ಬಿಜೆಪಿಯಲ್ಲಿ ಗುಜರಾತ್ನ ಜನರಿಗೆ ಮತ್ತು ಕೈಗಾರಿಕೋದ್ಯಮಿಗಳಿಗೆ ಮಾತ್ರ ಬಡ್ತಿ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಎಂಬ ಘೋಷಣೆಯನ್ನು ನೀಡಿದರು. ಆದರೆ ವಾಸ್ತವವೆಂದರೆ ಚುನಾವಣೆಯಲ್ಲಿ ಒಬ್ಬ ಮುಸಲ್ಮಾನರಿಗೂ ಟಿಕೆಟ್ ನೀಡುವುದಿಲ್ಲ. ಸಮಾಜದ ಒಂದು ವರ್ಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ. ಹೀಗಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದೇನೆ ಎಂದು ಹೇಳಿದ್ದಾರೆ.