ಹುಬ್ಬಳ್ಳಿ, ನ 15 (DaijiworldNews/PC): ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ಈ ಗ್ಯಾರಂಟಿಗಳೂ ಜನರಿಗೆ ಸಿಗುತ್ತಿಲ್ಲ ಸರ್ಕಾರದ ಯೋಜನೆಗಳ ಪ್ರಯೋಜನಗಳೂ ಜನರಿಗೆ ತಲುಪುತ್ತಿಲ್ಲ ಎಂದು ರಾಜ್ಯ ಸರ್ಕಾರವನ್ನು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.
ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವನ್ನು ಶೇಕಡಾ 85 ರಷ್ಟು ಕಡಿತಗೊಳಿಸಿರುವ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಜೋಶಿ, ರಾಜ್ಯದ ಆರ್ಥಿಕತೆಯ ಬೆಳವಣಿಗೆಯನ್ನು ಕುಂಠಿತಗೊಳಿಸಿದ ನಂತರ ಕಾಂಗ್ರೆಸ್ ಸರ್ಕಾರವು ಈಗ ಕರ್ನಾಟಕದ ವಿದ್ಯಾರ್ಥಿಗಳಿಗೆ ಕರಾಳ ದಿನಗಳ ‘ಗ್ಯಾರಂಟಿ’ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಶೇಕಡಾ 85 ರಷ್ಟನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದೆ ಎಂಬುದು ತಿಳಿದು ನನಗೆ ಆಘಾತವಾಗಿದೆ. ರಾಜ್ಯ ಸರ್ಕಾರದ ನಡೆ ಬಗ್ಗೆ ಭಾರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ.