ಚಿತ್ರದುರ್ಗ, ನ 16 (DaijiworldNews/HR): ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ 14 ತಿಂಗಳಿಂದ ಇದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಇಂದು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಮುರುಘಾ ಶ್ರೀ ಅವರಿಗೆ ಮೊದಲನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಸಂಬಂಧ ವಿಚಾರಣಾ ನ್ಯಾಯಾಲಯವಾದ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರ ಶ್ಯೂರಿಟಿ ಮತ್ತಿತರೆ ಅಂಶಗಳನ್ನು ಪರಿಶೀಲಿಸಿ ಬುಧವಾರ ಮಧ್ಯಾಹ್ನ ಬಿಡುಗಡೆಗೆ ಆದೇಶ ಮಾಡಿತ್ತು.
ಇನ್ನು ಸಂಜೆ ನ್ಯಾಯಾಲಯದ ಆದೇಶ ಪ್ರತಿ ತಲುಪುವುದು ವಿಳಂಭವಾಗಿದ್ದ ಕಾರಣಕ್ಕೆ ಇಂದು ಬೆಳಗ್ಗೆ ಜಿಲ್ಲಾ ಕಾರಾಗೃಹದಲ್ಲಿ ಬಿಡುಗಡೆ ಪ್ರಕ್ರಿಯೆ ನಡೆಸಿ ಮಧ್ಯಾಹ್ನ 12.40ಕ್ಕೆ ಬಿಡುಗಡೆಯಾಗಿದ್ದಾರೆ.