ತೀರ್ಥಹಳ್ಳಿ, ನ 16 (DaijiworldNews/HR): ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಆರು ಪೈಸದ ಅಭಿವೃದ್ಧಿ ಮಾಡುವುದಕ್ಕೆ ಸಿದ್ದರಾಮಯ್ಯ ಅವರು ಹಣ ನೀಡಿಲ್ಲ. ಆದರೆ ಆರು ತಿಂಗಳಲ್ಲಿ ಇಷ್ಟು ಕೆಟ್ಟ ಹೆಸರು ಪಡೆದುಕೊಂಡ ಸರ್ಕಾರ ಮತ್ತೊಂದಿಲ್ಲ ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಸಿದ್ದರಾಮಯ್ಯ ಪುತ್ರ ಯತೀಂದ್ರ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮಾತನಾಡಿರುವ ಅವರು, ಯತೀಂದ್ರ ಅವರು ಮಾತನಾಡಿದ ವಿಡಿಯೋ ವೈರಲ್ ಆಗಿರೋದನ್ನ ಎಲ್ಲರೂ ನೋಡುತ್ತಿದ್ದೇವೆ. ಇದರ ಬಗ್ಗೆ ತನಿಖೆ ಆಗಲೇಬೇಕು ಅವರು ಏನು ಮಾತನಾಡುತ್ತಿದ್ದಾರೆ ಯಾರಿಗೆ ನಿರ್ದೇಶನ ನೀಡುತ್ತಿದ್ದಾರೆ. ತಂದೆ ಸಿದ್ದರಾಮಯ್ಯ ಅವರಿಗೆ ಅಧಿಕಾರದ ಹಕ್ಕಿದೆ. ಆದರೆ ಅವರ ಮಗ ಮೂಗು ತೋರಿಸುತ್ತಿರುವುದು ತಪ್ಪು ಎಂದರು.
ಇನ್ನು ಈ ಬಗ್ಗೆ ತನಿಖೆಯನ್ನು ನಡೆಸಬೇಕು ಹಾಗೆ ಸಿದ್ದರಾಮಯ್ಯ ಅವರು ಜನರಿಗೆ ಏನಾಗಿದೆ ಎಂಬುದರ ಬಗ್ಗೆ ತಿಳಿಸಿಕೊಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಆರು ಪೈಸದ ಅಭಿವೃದ್ಧಿ ಮಾಡುವುದಕ್ಕೆ ಸಿದ್ದರಾಮಯ್ಯ ಅವರು ಹಣ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.