ಬೆಂಗಳೂರು, ನ 17 (DaijiworldNews/MS): ದೀಪಾವಳಿ ಹಬ್ಬದ ನಿಮಿತ್ತ ನಗರದ ಜೆ.ಪಿ.ನಗರದಲ್ಲಿರುವ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ 68,526 ರೂಪಾಯಿ ದಂಡ ವಿಧಿಸಿದೆ.
ಆದರೆ ಈ ದಂಡ ನಿಯಮಕ್ಕಿಂದ ಜಾಸ್ತಿಯಾಗಿದೆ ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. 2,526 ರೂ. ಬಿಲ್ ಬದಲು 68,526 ರೂಪಾಯಿ ಬಿಲ್ ನೀಡಿದ್ದಾರೆ. ಬೆಸ್ಕಾಂ ಇಲಾಖೆ ಅಧಿಕಾರಿಗಳು 68,526 ರೂಪಾಯಿ ದಂಡ ವಿಧಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಸ್ಕಾಂ 2.5 ಕಿಲೋ ವ್ಯಾಟ್ಗೆ ಲೆಕ್ಕ ತೆಗೆದುಕೊಂಡಿದ್ದು, ಏಳು ದಿನಕ್ಕೆ 71 ಯೂನಿಟ್ ಆಗಲಿದೆ ಎಂದು ಕೊಟ್ಟಿದ್ದಾರೆ. 71 ಯೂನಿಟ್ಗೆ ಮೂರು ಪಟ್ಟು ದಂಡ ವಿಧಿಸಿದ್ದಾರೆ. ಹೀಗಾಗಿ ಕರೆಂಟ್ ಬಿಲ್ ಬಗ್ಗೆ ಪುನರ್ ಪರಿಶೀಲನೆ ಮಾಡಲು ಹೇಳಿದ್ದೇನೆ. 2,526 ರೂಪಾಯಿ ಬಿಲ್ ಬದಲಿಗೆ 68,526 ರೂ. ಕರೆಂಟ್ ಬಿಲ್ ನೀಡಿದೆ ಎಂದು ಹೇಳಿದ್ದಾರೆ.