ಬೆಂಗಳೂರು, ನ 17 (DaijiworldNews/AA) : ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ವಿರುದ್ಧ ಪ್ರೀತಿ ಹೆಸರಲ್ಲಿ ವಂಚನೆಯ ಆರೋಪ ಕೇಳಿ ಬಂದಿದೆ.ಈ ಬಗ್ಗೆ ಯುವತಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ರಂಗನಾಥ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ಖಾಸಗಿ ಹೋಟೆಲ್ನಲ್ಲಿ ನನ್ನ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ನನ್ನನ್ನು ಮದುವೆಯಾಗಿ ಎಂದಾಗ ಕಡೆಗಣಿಸಿದ್ದಾರೆ ಎಂದು ಸಂತಸ್ತ್ರೆ ದೂರಿದ್ದಾರೆ.
ಅಲ್ಲದೇ ನಿನ್ನನ್ನು ಮದುವೆ ಆಗುವುದಿಲ್ಲ. ಏನು ಮಾಡ್ತಿಯೊ ಮಾಡಿಕೋ. ಹಣ ಕೊಡುತ್ತೇನೆ ನನ್ನನ್ನು ಬಿಟ್ಟುಬಿಡು ಎಂದು ನನಗೆ ಹೇಳಿದ್ದಾರೆ. ಈಗ ನೋಡಿದರೆ ನನ್ನ ವಿರುದ್ಧವೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಂಗನಾಥ್ ಬೆಂಗಳೂರು ಮೂಲದ ಯುವತಿಗೆ ವಂಚಿಸಿದ್ದು, ಇವರಿಬ್ಬರು ಒಂದೂವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ ಪರಿಚಯವಾಗಿದ್ದರು. ಬಳಿಕ ಇವರಿಬ್ಬರು ಪ್ರೀತಿಸಲು ಪ್ರಾರಂಭಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಯುವತಿ ನೀಡಿದ ದೂರಿನ ಅನ್ವಯ ರಂಗನಾಥ್ ಅವರ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಇನ್ನು ರಂಗನಾಥ್ ಅವರು ಸಹ ಯುವತಿಯ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನಲ್ಲಿ ಯುವತಿಯು ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಹಣ ನೀಡುವಂತೆ ಬ್ಲ್ಯಾಕ್ಮೇಲ್ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.