ಬೆಂಗಳೂರು,ನ 17 (DaijiworldNews/RA) : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲ ನಟರಾಜ್ ಶರ್ಮಾ ಎಂಬವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 600 ಕೋಟಿ ರೂ.ಗಿಂತಲೂ ಹೆಚ್ಚು ಭ್ರಷ್ಟಾಚಾರವಾಗಿದ್ದು ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ ಸರಬರಾಜಿನಲ್ಲಿ ಅವ್ಯವಹಾರ ನಡೆದಿದೆ ಎಂದಿದ್ದಾರೆ.
ಅನರ್ಹಗೊಂಡಿರುವ ಸಹಕಾರ ಸಂಸ್ಥೆಗಳಿಂದ ಅಂಗನವಾಡಿಗಳಿಗೆ ಪೌಷ್ಠಿಕ ಆಹಾರ ಪೂರೈಕೆ ಮಾಡುವ ಟೆಂಡರ್ ನೀಡಿದ್ದಾರೆ. ಬ್ಲಾಕ್ ಲೀಸ್ಟ್ ನಲ್ಲಿರುವ ಕ್ರಿಸ್ಟಿ ಫ್ರೈಡ್ ಗ್ರಾಮ್ ಕಂಪನಿ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಇಲಾಖೆ ಅಧಿಕಾರಿಗಳು ಶಾಮೀಲಾಗಿ ಈ ಟೆಂಡರ್ ನೀಡಿದ್ದಾರೆ ಎಂದು ವಕೀಲ ಶರ್ಮ ಅವರು ಲೋಕಾಯುಕಕ್ಕೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.