ತುಮಕೂರು, ಎ16(Daijiworld News/SS): ಜೆಡಿಎಸ್ ಸ್ಪರ್ಧಿಸಿರುವ ಏಳಕ್ಕೆ ಏಳು ಸ್ಥಾನಗಳಲ್ಲಿ ಗೆಲ್ಲುತ್ತೋ ಅಥವಾ 6 ಸ್ಥಾನಗಳಲ್ಲಿ ಗೆಲ್ಲುತ್ತೋ ಹೇಳುವುದಕ್ಕೆ ಆಗುವುದಿಲ್ಲ. ಆದರೆ, ನಮ್ಮ ಸರ್ಕಾರ ಬಾರದಿದ್ದರೂ ನಾನು ಕೆಲಸ ಮಾಡಿಸುತ್ತೇನೆ ಎಂದು ತುಮಕೂರು ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ತಿಳಿಸಿದರು.
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಬಡತನ ಹೆಚ್ಚಿದೆ. ತೆಂಗು ಬೆಳೆಗೆ ನೀರಿಲ್ಲದೆ ತೊಂದರೆಯಾಗಿದೆ. ಹೀಗಾಗಿ ಡಿಸಿಎಂ ಪರಮೇಶ್ವರ್ ಅವರೊಂದಿಗೆ ನಾನೂ ಕೈಜೋಡಿಸಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಜೆಡಿಎಸ್ ಸ್ಪರ್ಧಿಸಿರುವ ಏಳಕ್ಕೆ ಏಳು ಸ್ಥಾನಗಳಲ್ಲಿ ಗೆಲ್ಲುತ್ತೋ ಅಥವಾ 6 ಸ್ಥಾನಗಳಲ್ಲಿ ಗೆಲ್ಲುತ್ತೋ ಹೇಳುವುದಕ್ಕೆ ಆಗುವುದಿಲ್ಲ. ಆದರೆ ನಮ್ಮ ಸರ್ಕಾರ ಬಾರದಿದ್ದರೂ ನಾನು ಬೇರೆಯವರಿಂದ ಕೆಲಸ ಮಾಡಿಸುತ್ತೇನೆ. ನಾನು ಚುನಾವಣೆ ಬಗ್ಗೆ ವಿಶ್ಲೇಷಣೆ ಮಾಡುವುದಿಲ್ಲ. ನನಗೆ ನನ್ನದೇ ಸ್ಫೂರ್ತಿಯಿದೆ. ತುಮಕೂರು ಕ್ಷೇತ್ರಕ್ಕೆ ಹೊಸಬನಾದರೂ ಜನರಿಗೆ ನಾನು ಗೊತ್ತಿದ್ದೇನೆ. ಸ್ಪಲ್ಪ ಮಟ್ಟಿಗೆ ಜನರಿಂದ ಪ್ರೋತ್ಸಾಹ ಸಿಗುತ್ತಿದೆ ಎಂದು ತಿಳಿಸಿದರು.
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಈ ಬಾರಿ ಯಾರು ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಎನ್ನುವ ಲೆಕ್ಕಾಚಾರಗಳು ಜೋರಾಗಿ ನಡೆದಿವೆ. ಅದರಲ್ಲೂ ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ.