ಕಲಬುರಗಿ,ಎ16(Daijiworld News/AZM):ಲೋಕಸಭಾ ಚುನಾವಣೆಯ ಮಧ್ಯೆಯೇ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಮೇ.೧೯ರಂದು ಉಪಚುನಾವಣೆ ನಡೆಯಲಿದ್ದು, ಮೇ.23ರಂದು ಫಲಿತಾಂಶ ಘೋಷಣೆಯಾಗಲಿದೆ ಎಂದು ಚುನಾವಣಾ ಆಯೋಗ ಇಂದು ಹೇಳಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಿಂದ ಡಾ.ಉಮೇಶ್ ಜಾಧವ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಗಳಿಸಿದ್ದರು. ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಆದ್ದರಿಂದ, ಉಪ ಚುನಾವಣೆ ಎದುರಾಗಿದೆ. ಲೋಕಸಭಾ ಚುನಾವಣೆಯಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಮೇ 19ರಂದು ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ. ಮೇ 23ರಂದು ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಯಾಗಲಿದ್ದು, ಅಂದೇ 2 ಕ್ಷೇತ್ರದ ಉಪ ಚುನಾವಣೆಗಳ ಫಲಿತಾಂಶ ಪ್ರಕಟವಾಗಲಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಡಾ.ಉಮೇಶ್ ಜಾಧವ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿಂಚೋಳಿ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. 73,905 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಸುನೀಲ್ ವಲ್ಯಾಪುರೆ ಅವರು 54,693 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.