ಶಿವಮೊಗ್ಗ, ನ 21 (DaijiworldNews/HR): ಜಮೀರ್ ಅಹಮ್ಮದ್ ಸಂವಿಧಾನ ಪೀಠಕ್ಕೆ ಅಪಮಾನ ಮಾಡಿದದ್ದು, ತಕ್ಷಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಮುಂದಿನ ದಿನಗಳಲ್ಲಿ ಜನ ಮತ ಹಾಕಬೇಕಾದರೆ ಯೋಚನೆ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಭಾರತದ ಸಂವಿಧಾನ ಪ್ರಕಾರ ಆಡಳಿತ ನಡೆಸುತ್ತಿದೆಯಾ ಅಥವಾ ಪಾಕಿಸ್ತಾನದ ಇಸ್ಲಾಮಿಕ್ ಪ್ರಕಾರ ಆಡಳಿತ ನಡೆಸುತ್ತಿದೆಯಾ? ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು. ಜಮೀರ್ ಅಹಮ್ಮದ್ ತೆಲಂಗಾಣದಲ್ಲಿ ಪ್ರಚಾರಕ್ಕೆ ಹೋದಾಗ ಸರ್ಕಾರದ ಸಭಾಧ್ಯಕ್ಷ ಪೀಠಕ್ಕೆ ಅಪಮಾನ ಮಾಡಿದ್ದಾರೆ ಎಂದರು.
ಇನ್ನು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರು ಜಮೀರ್ ಹೇಳಿಕೆ ಬಗ್ಗೆ ನಿಲುವು ಸ್ಪಷ್ಟಪಡಿಸಬೇಕು. ಅವರನ್ನು ಕಿತ್ತು ಹಾಕಿದರೆ ತಮ್ಮ ಸ್ಥಾನ ಹೋಗುವ ಬಗ್ಗೆ ಸಿದ್ದರಾಮಯ್ಯನವರಿಗೆ ಏನಾದರೂ ಭಯ ಇದೆಯಾ? ಜಮೀರ್ ಅಹಮ್ಮದ್ ಹೇಳಿಕೆಗೆ ಹಿಂದೂ ಸಮಾಜ ಜಾಗೃತರಾಗಬೇಕು. ಬರುವಂತಹ ಚುನಾವಣೆಯಲ್ಲಿ ಹಿಂದೂ ಸಮಾಜ ಮೋದಿ ಕೈ ಬಲಪಡಿಸಬೇಕು ಎಂದಿದ್ದಾರೆ.