ಬೆಂಗಳೂರು, ನ 21 (DaijiworldNews/HR): ಜಾತಿ ಜನಗಣತಿ ವರದಿ ಬಿಡುಗಡೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ವಿರೋಧ ವ್ಯಕ್ತಪಡಿಸಿದ್ದಾರೆ.
ಜಾತಿಜನಗಣತಿ ವರದಿ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಇದಕ್ಕೆ ಲಿಂಗಾಯತ ಸಮುದಾಯ ಮಾತ್ರವಲ್ಲದೆ, ಒಕ್ಕಲಿಗ ಸಮುದಾಯವೂ ವಿರೋಧ ವ್ಯಕ್ತಪಡಿಸುತ್ತಿದೆ.
ಇನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಸಿರುವ ವರದಿ ತಿರಸ್ಕರಿಸುವ ಒಕ್ಕಲಿಗರ ಸಂಘದ ಮನವಿ ಪತ್ರಕ್ಕೆ ಡಿ.ಕೆ.ಶಿವಕುಮಾರ್ ಕೂಡ ಸಹಿ ಹಾಕಿದ್ದಾರೆ.
ಗೃಹಸಚಿವ ಡಾ.ಜಿ.ಪರಮೇಶ್ವರ, ಸಚಿವರಾದ ಸತೀಶ್ ಜಾರಕಿಹೊಳಿ, ಶಿವರಾಜ್ ತಂಗಡಗಿ ಸೇರಿದಂತೆ ಅನೇಕರು ವರದಿ ಜಾರಿಗೆ ಸಿಎಂ ಸಿದ್ದರಾಮಯ್ಯ ಮೇಲೆ ಒತ್ತಡ ಹೇರುತ್ತಲೇ ಇದ್ದು, ಇತ್ತ ವರದಿ ಬಿಡುಗಡೆಗೆ ಲಿಂಗಾಯತ ಸಮುದಾಯ ವಿರೋಧ ವ್ಯಕ್ತಪಡಿಸಿದೆ.