ಶ್ರೀನಗರ, ನ. 22 (DaijiworldNews/AK): ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಜಿ ಮಾಲ್ ಅರಣ್ಯದಲ್ಲಿ ನಡೆದ ಭೀಕರ ಎನ್ಕೌಂಟರ್ನಲ್ಲಿ ಕ್ಯಾಪ್ಟನ್ ಶ್ರೇಣಿಯ ಒಬ್ಬ ಸೇನಾ ಅಧಿಕಾರಿ ಮತ್ತು ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಎನ್ಕೌಂಟರ್ನಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಸೇನೆಯ ವಿಶೇಷ ಪಡೆಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಎನ್ಕೌಂಟರ್ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಎನ್ಕೌಂಟರ್ನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಿರ್ ಪಂಜಾಲ್ ಅರಣ್ಯವು ಕಳೆದ ಕೆಲವು ವರ್ಷಗಳಲ್ಲಿ ಸರಣಿ ಎನ್ಕೌಂಟರ್ಗಳ ನಂತರ ಭದ್ರತಾ ಪಡೆಗಳಿಗೆ ಸವಾಲಾಗಿದೆ. ಭಯೋತ್ಪಾದಕರು ದಟ್ಟವಾದ ಕಾಡುಗಳನ್ನು ತಮ್ಮ ಸ್ಥಾನಗಳನ್ನು ಮರೆಮಾಡಲು ಬಳಸುತ್ತಾರೆ ಎನ್ನಲಾಗಿದೆ.