ಬೆಂಗಳೂರು, ನ 23 (DaijiworldNews/AA): ಡಿಸಿಎಂ ಡಿಕೆ ಶಿವಕುಮಾರ್ ಅವರ ದೆಹಲಿ ನಿವಾಸಗಳ ಮೇಲೆ ಐಟಿ ದಾಳಿ ಮಾಡಿದ್ದ ಪ್ರಕರಣದಲ್ಲಿ ವಿದೇಶ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಡಿಕೆಶಿ ದುಬೈಗೆ ತೆರಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಯಾಣಕ್ಕಿರುವ ನಿರ್ಬಂಧಕ್ಕೆ ವಿನಾಯತಿ ನೀಡಿದೆ.
ಐಟಿ ಪ್ರಕರಣದಲ್ಲಿ ಸಿಲುಕಿರುವ ಡಿಕೆಶಿ ಅವರು ವಿಶ್ವಸಂಸ್ಥೆಯ ಪರಿಸರ ಸಮ್ಮೇಳನದಲ್ಲಿ ಭಾಗವಹಿಸಲು ದುಬೈಗೆ ತೆರಳಬೇಕುದೆ. ಈ ಹಿನ್ನೆಲೆ ನವೆಂಬರ್ 29ರಿಂದ ಡಿಸೆಂಬರ್ 3ರ ವರೆಗೆ ದುಬೈಗೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶೆ ಜೆ. ಪ್ರೀತ್ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಿದ್ದಾರೆ.
ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆಯಾಜ್ಞಾನೆ ನೀಡಿತ್ತು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಬಿಐನಿಂದ ಹೈಕೋರ್ಟ್ಗೆ ಇತ್ತೀಚೆಗಷ್ಟೇ ಅರ್ಜಿ ಸಲ್ಲಿಸಲಾಗಿತ್ತು. ಇನ್ನು ಈ ಎಲ್ಲಾ ಗೊಂದಲಗಳ ಮಧ್ಯೆ ಡಿಕೆಶಿ ಅವರ ವಿದೇಶ ಪ್ರಯಾಣಕ್ಕೆ ಅನುಮತಿ ದೊರೆತಿದೆ.