ನವದೆಹಲಿ, ನ 24 (DaijiworldNews/PC): ಐಟಿ ನಿಯಮ ನಿಯಮವನ್ನು ಉಲ್ಲಂಘಿಸಿದ ಸಾಮಾಜಿಕ ಮಾದ್ಯಮ ಸಂಸ್ಥೆಗಳ ವಿರುದ್ದ ಸರಕಾರವು ಎಫ್ಐಆರ್ ದಾಖಲಿಸಿದೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ ಗಳಲ್ಲಿ ಡೀಪ್ ಫೇಕ್ ಗಳಿಂದ ವಿವಿಧ ತೊಂದರೆಗಳು ಉಂಟು ಮಾಡಿ ಭಾರೀ ಸದ್ದು ಮಾಡಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷಯಗಳಿಂದ ನೊಂದಿದ್ದರೆ ಐಟಿ ನಿಯಮಗಳ ಉಲ್ಲಂಘನೆಗಾಗಿ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸರಕಾರವು ನಾಗರಿಕರಿಗೆ ನೆರವಾಗಲಿದೆ.
ಸಾಮಾಜಿಕ ಜಾಲತಾಣಗಳ ಬಳಕೆದಾರರು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಐಟಿ ನಿಯಮ ಉಲ್ಲಂಘನೆಯ ಬಗ್ಗೆ ತಿಳಿಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ವೇದಿಕೆಯನ್ನು ಅಭಿವೃದ್ಧಿಪಡಿಸಲಿದೆ. ಇಂದಿನಿಂದ ಐಟಿ ನಿಯಮಗಳ ಉಲ್ಲಂಘನೆಗೆ ಶೂನ್ಯ ಸಹಿಷ್ಣುತೆ ಇದೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಪ್ರಮುಖರ ಸಭೆಯ ನಂತರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.