ಬೆಂಗಳೂರು,ನ 25(DaijiworldNews/PC): ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿಗೆ ಆಗಮಿಸಿದ್ದು ,ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಇಳಿದಿದ್ದಾರೆ.
ಪ್ರಧಾನಿ ಮೋದಿಯು ಹೆಚ್ಎಎಲ್ ಸಂಸ್ಥೆಯ ಕಾರ್ಯಕ್ರಮದ ಪ್ರಯುಕ್ತ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಮೋದಿ ಬರುವ ವೇಳೆ ಬಿಗಿ ಭದ್ರತೆಯನ್ನು ಏರ್ಪಡಿಸಿದ್ದು, ಸುಮಾರು 500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ವೈಟ್ಫೀಲ್ಡ್ ಡಿಸಿಪಿ ನೇತೃತ್ವದಲ್ಲಿ ಪೊಲೀಸರ ಬಂದೋಬಸ್ತ್ ಮಾಡಲಾಗಿದ್ದು. 4 ಎಸಿಪಿ, 8 ಇನ್ಸ್ಪೆಕ್ಟರ್ ಸೇರಿ 500 ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಪ್ರಧಾನಿ ಮಧ್ಯಾಹ್ನ 12 ಗಂಟೆಯವರೆಗೆ ಹೆಚ್ಎಎಲ್ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗಿ ಬಳಿಕ ತೇಜಸ್ ಯುದ್ಧ ವಿಮಾನ ಉತ್ಪಾದನೆಯನ್ನು ಪರಿಶೀಲಿಸಲಿದ್ದಾರೆ. ಭಾರತೀಯ ವಾಯುಸೇನೆ ವಿಮಾನದ ಮೂಲಕ 12:15ಕ್ಕೆ ತೆಲಂಗಾಣಕ್ಕೆ ಪ್ರಯಾಣ ಬೆಳೆಸಲಿದ್ದು ಅಲ್ಲಿನ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ.