ಬೆಂಗಳೂರು, ನ 26 ( DaijiworldNews/HR): ಬಿಜೆಪಿಯೊಂದಿಗಿನ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ. ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಗಾಲಿ ಜನಾರ್ದನ ರೆಡ್ಡಿ ಅವರನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಲು ಬಿಜೆಪಿ ಮುಂದಾಗಿದ್ದು ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ನಾನು ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಕೊಳ್ಳಲಿಲ್ಲ. ಸ್ವತಂತ್ರವಾಗಿಯೇ ಮುಂದೆ ಹೋಗುತ್ತೇನೆ ಎಂದರು.
ಇನ್ನು ಲೋಕಸಭಾ ಚುನಾವಣೆ ದೃಷ್ಟಿಯಿಂದ ಯಾರೂ ನನ್ನ ಸಂಪರ್ಕ ಮಾಡಿಲ್ಲ, ನಾನು ಲೋಕಸಭಾ ಚುನಾವಣೆಗೆ ಸ್ಫರ್ಧೆ ಮಾಡುವುದಿಲ್ಲ. ಆದರೆ ಎಂಟು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.