ಕೊಚ್ಚಿ ನ 26 ( DaijiworldNews/HR): ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಟೆಕ್ ಫೆಸ್ಟ್ ಅಂಗವಾಗಿ ನಡೆದ ಸಂಗೀತ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ.
ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ (ಕುಸಾಟ್) ಇಂಜಿನಿಯರಿಂಗ್ ಕಾಲೇಜಿನಲ್ಲಿ 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಮೂರು ದಿನಗಳ ಟೆಕ್ ಫೆಸ್ಟ್ನ ಅಂಗವಾಗಿ, ನಿಕಿತಾ ಗಾಂಧಿ ಅವರ ಸಂಗೀತ ಕಾರ್ಯಕ್ರಮವನ್ನು ಕೊನೆಯ ದಿನ ಏರ್ಪಡಿಸಲಾಗಿತ್ತು. ಈ ವೇಳೆ ಘಟನೆ ಸಂಭವಿಸಿದೆ.
ಇನ್ನು ನೂಕು ನುಗ್ಗಲಿನಲ್ಲಿ 55 ಮಂದಿಗೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದೂ ವರದಿಯಾಗಿದೆ.
ಗಾಯಕಿ ನಿಖಿತಾ ಗಾಂಧಿ ಕ್ಯಾಂಪಸ್ನಲ್ಲಿರುವ ಓಪನ್ ಏರ್ ಆಡಿಟೋರಿಯಂನಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಪಾಸ್ ಇಲ್ಲದವರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಹೀಗಾಗಿ ವಿದ್ಯಾರ್ಥಿಗಳು ಹೊರಗಡೆ ನಿಂತು ಕಾರ್ಯಕ್ರಮ ವೀಕ್ಷಿಸುತ್ತಿದ್ದರು. ಆಗ ಜೋರಾಗಿ ಮಳೆಯಾಗಿದೆ. ಈ ವೇಳೆ ಓಡಿ ಆಡಿಟೋರಿಯಂಗೆ ನುಗ್ಗಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದೆ.