ನವದೆಹಲಿ, ನ 30 (DaijiworldNews/MR): 2024ರ ಲೋಕಸಭಾ ಚುನಾವಣೆಗೆ ಮುನ್ನ ದೇಶದಲ್ಲಿ ಪಂಚರಾಜ್ಯ ಚುನಾವಣೆ ನಡೆಯುತ್ತಿದೆ. ಈಗಾಗಲೇ ಐದು ರಾಜ್ಯಗಳಲ್ಲೂ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಈ ಮಧ್ಯೆ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು, ರಾಜಸ್ಥಾನದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಸರ್ವೇಗಳು ಹೇಳುತ್ತಿವೆ.
ರಾಜಸ್ಥಾನ ಚುನಾವಣೆ ಫಲಿತಾಂಶದ ಬಗ್ಗೆ ಜನ್ ಕೀ ಬಾತ್ ಎಕ್ಸಿಟ್ ಪೋಲ್ ವಿವರಗಳು ಹೊರಬಿದ್ದಿವೆ. ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಪಕ್ಷ 62-85 ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ. ಬಿಜೆಪಿ ಮಾತ್ರ 100-122 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದು ಬಂದಿದೆ.
ಇನ್ನೂ, ಇತರ ಪಕ್ಷಗಳು 14 ರಿಂದ 15 ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ. ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ನ. 25ರಂದು ಮೊದಲ ಹಂತದಲ್ಲಿ ಮತದಾನ ನಡೆದಿದೆ. ರಾಜಸ್ಥಾನದ 200 ವಿಧಾನಸಭಾ ಕ್ಷೇತ್ರದಲ್ಲಿ 5 ಕೋಟಿಗೂ ಹೆಚ್ಚು ಮತದಾರರು ಇದ್ದಾರೆ.