ಬೆಂಗಳೂರು,ಡಿ 02 (DaijiworldNews/RA):ರಾಜಕೀಯ ಜಗಳದಲ್ಲಿ ಸಾಮಾನ್ಯವಾಗಿ ವಿರೋಧ ಪಕ್ಷದ ನಾಯಕರು ಆಡಳಿತ ಪಕ್ಷ,ನಾಯಕರ ವಿರುದ್ಧ ಆರೋಪಗಳನ್ನು ಮಾಡುವುದು ಕಾಮನ್ ಬಿಡಿ.ಆದ್ರೆ ಶಾಸಕರು ತನ್ನದೇ ಪಕ್ಷದ ಸಚಿವರ ವಿರುದ್ಧ ಹರಿಹಾಯ್ದಿದಿದ್ದಾರೆ.
ರಾಜ್ಯದದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷದ ಬೇಳೂರು ಶಾಸಕರಾದ ಗೋಪಾಲಕೃಷ್ಣ ಅವರು ತಮ್ಮದೇ ಪಕ್ಷದ ಸಚಿವ ಮಧು ಬಂಗಾರಪ್ಪನವರ ನಡೆಯ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು , ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ತನ್ನ ಅಸಮಾಧನ ಹೊರ ಹಾಕಿದ್ದಾರೆ.
ಅವರು ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ.ನಾವುಗಳು ಬಿಎಸ್ ಯಡಿಯೂರಪ್ಪ ಅವರ ಮಕ್ಕಳನ್ನು ಸೋಲಿಸಬೇಕು ಎಂದು ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೆ ಒಡಕು ಮೂಡಿಸುತ್ತಿದ್ದಾರೆ.
ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು.ಎಲ್ಲರನ್ನು ಅವರು ಒಗ್ಗೂಡಿಸಿ ಕರೆದುಕೊಂಡು ಹೋಗಬೇಕು. ಅವರೆ ಪಕ್ಷವನ್ನ ಒಡೆಯುವುದಲ್ಲ ಎಂದರು.
ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ.ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ.ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ.ನಾವು ಶಾಸಕರಲ್ವಾ ನಮಗೂ ಜವಾಬ್ದಾರಿ ಇಲ್ವಾ ಎಂದು ಪ್ರಶ್ನಿಸಿದರು.
ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.