ಬೆಂಗಳೂರು, ಡಿ 02 (DaijiworldNews/AK): ಭಾರತದ ಆದಿತ್ಯ-ಎಲ್-1 ಉಪಗ್ರಹದಲ್ಲಿ ಸೋಲಾರ್ ವಿಂಡ್ ಪಾರ್ಟಿಕಲ್ ಎಕ್ಸ್ಪೆರಿಮೆಂಟ್ ಪೇಲೋಡ್ ತನ್ನ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ಮಾಹಿತಿ ನೀಡಿದೆ.
ಇಸ್ರೋದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV-C57) ಸೆಪ್ಟೆಂಬರ್ 2ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಎರಡನೇ ಉಡಾವಣಾ ಕೇಂದ್ರದಿಂದ ಆದಿತ್ಯ-L1 ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿತ್ತು.
ಆದಿತ್ಯ-L1 ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಮೀ ದೂರದಲ್ಲಿರುವ ಮೊದಲ ಸೂರ್ಯ-ಭೂಮಿಯ ಲಗ್ರಾಂಜಿಯನ್ ಪಾಯಿಂಟ್ (L1) ಸುತ್ತ ಕರೋನಲ್ ಕಕ್ಷೆಯಿಂದ ಸೂರ್ಯನನ್ನು ಅಧ್ಯಯನ ಮಾಡುವ ಮೊದಲ ಭಾರತೀಯ ಬಾಹ್ಯಾಕಾಶ-ಆಧಾರಿತ ವೀಕ್ಷಣಾಲಯವಾಗಿದೆ.
ಆದಿತ್ಯ ಸೌರ ಮಾರುತ ಕಣ ಪ್ರಯೋಗ (ASPEX) ಎರಡು ಅತ್ಯಾಧುನಿಕ ಉಪಕರಣಗಳನ್ನು 'ಸೋಲಾರ್ ವಿಂಡ್ ಐಯಾನ್ ಸ್ಪೆಕ್ಟ್ರೋಮೀಟರ್ (SWIS) ಮತ್ತು ಸುಪ್ರಥರ್ಮಲ್ ಮತ್ತು ಎನರ್ಜಿಟಿಕ್ ಪಾರ್ಟಿಕಲ್ ಸ್ಪೆಕ್ಟ್ರೋಮೀಟರ್ (STEPS) ಒಳಗೊಂಡಿದೆ ಎಂದು ಇಸ್ರೋ ಹೇಳಿಕೆಯಲ್ಲಿ ತಿಳಿಸಿತ್ತು.