ಕಲಬುರಗಿ, ಡಿ 03 (DaijiworldNews/HR): ಕಾಂಗ್ರೆಸ್ ಮುಕ್ತ ಭಾರತ ಸಾಧ್ಯವಿಲ್ಲ ಎಂಬುದು ಬಿಜೆಪಿಗರಿಗೆ ಈಗ ಮತ್ತೊಮ್ಮೆ ಅರಿವಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮುಂದೆ ಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಮುಖಂಡರಿಗೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಮೂಲಕ ಮತದಾರನೇ ಉತ್ತರ ನೀಡಿದ್ದಾನೆ ಎಂದರು.
ಇನ್ನು ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಉಳಿದ ರಾಜ್ಯಗಳಲ್ಲಿ ಅಧಿಕಾರ ಹಿಡಿಯದಿದ್ದರೂ ಹೆಚ್ಚಿನ ಸ್ಥಾನ ಪಡೆದಿದೆ. ಈ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಸಾಧ್ಯವಿಲ್ಲ ಎಂಬುದು ಬಿಜೆಪಿಗರಿಗೆ ಈಗ ಮತ್ತೊಮ್ಮೆ ಅರಿವಿಗೆ ಬಂದಿದೆ ಎಂದು ಹೇಳಿದ್ದಾರೆ.