ಹಾಸನ, ಡಿ 04(DaijiworldNews/RA): ಸರ್ಕಾರಕ್ಕೆ ಪ್ರತ್ಯುತ್ತರ ಕೊಡುವ ಶಕ್ತಿ ಜೆಡಿಎಸ್ , ಬಿಜೆಪಿ ಪಕ್ಷಕ್ಕಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಿಳಿಸಿದರು.
ಸಂಸದರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿಯವರ ನಾಯಕತ್ವದಲ್ಲಿ ಮುಂಬರುವ ಲೋಕಾಸಭಾ ಚುನಾವಣೆಯಲ್ಲಿ ಮೈತ್ರಿ ಮೂಲಕ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡುವುದಾಗಿ ತಿಳಿಸಿದರು.
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬಂದಿದೆ. ಎನ್ಡಿಎಗೆ ಪರ್ಯಾಯವಾಗಿ ಇಂಡಿಯಾ ಒಕ್ಕೂಟ 46 ಪ್ರಾದೇಶಿಕ ಪಕ್ಷಗಳು ಸೇರಿ ಮಾಡಿಕೊಂಡಿವೆ. ಕಾಂಗ್ರೆಸ್ ಅದರ ನೇತೃತ್ವದಲ್ಲಿ ವಹಿಸಿಕೊಂಡಿದ್ದರಿಂದ ನಮ್ಮನ್ನು ಅದರಿಂದ ಹೊರಗಿಟ್ಟಿದ್ದಾರೆ ಎಂದರು.
ಇಂಡಿಯಾ ಒಕ್ಕೂಟ ನಮ್ಮನ್ನ ಹೊರಗಿಟ್ಟ ಮೇಲೆ ಮೋದಿ ಮತ್ತು ಅಮಿತ್ ಶಾ ನಮ್ಮನ್ನ ಸ್ವಾಗತ ಮಾಡಿದ್ದಾರೆ. ಜೆಡಿಎಸ್ ಲೆಕ್ಕಕ್ಕಿಲ್ಲ. ಆಟಕ್ಕಿಲ್ಲ ಕೆಲ ದಿನಗಳಲ್ಲಿ ಜೆಡಿಎಸ್ ಇರೋದಿಲ್ಲ ಎಂದು ಕಾಂಗ್ರೆಸ್ ಮುಖಂಡರು ಲಘುವಾಗಿ ಮಾತನಾಡಿದ್ದರು. ಮೋದಿಯವರು ವೈಯುಕ್ತಿಕವಾಗಿ ನನ್ನ ಬಗ್ಗೆ ಗೌರವ ಇಟ್ಟುಕೊಂಡಿದ್ದಾರೆ ಎಂದರು.
ಕಾಂಗ್ರೆಸ್ ನ ನಡವಳಿಕೆಯನ್ನ ಸೂಕ್ಷ್ಮವಾಗಿ ಗಮನಿಸಿ, ನಮ್ಮನ್ನ ಅವರ ಜೊತೆ ಸ್ವಾಗತಿಸಿದ್ದಾರೆ. ಈ ಪಕ್ಷ ಮುಗಿಸಲೇಬೇಕು ಎಂದಾಗ ಮೋದಿಯವರು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಮೋದಿಯವರು, ಶಾ, ನಡ್ಡಾ ವಿಜಯೇಂದ್ರ, ಅಶೋಕ್ ಎಲ್ಲರೊಂದಿಗೆ ಚರ್ಚಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು.